Dr C P Ravikumar

ಗ್ಯಾಬಪೆನ್ಟಿನ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ

MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)

ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ಹೆಸರುಗಳು

ಮಾತ್ರೆ/ ಕ್ಯಾಪ್ಸುಲ್: ಗಬಾಪಿನ್

ಮಾತ್ರೆ: ಗಬಪಾಕ್ಸ್

ಬಿಡುಗಡೆಯಲ್ಲಿ ವಿಳಂಬ: ಗಬಾಪಿನ್ ಎಸ್ ಆರ್

ಜೆನರಿಕ್ Vs ಬ್ರ್ಯಾಂಡೆಡ್ ಔಷಧಿಗಳು

ಗ್ಯಾಬಪೆನ್ಟಿನ್ ಎನ್ನುವುದು ಫೋಕಲ್ ಅಪಸ್ಮಾರದ ಚಿಕಿತ್ಸೆಯಲ್ಲಿ ಬಳಸುವ ಒಂದು ಔಷಧ. ಸಾಮಾನ್ಯವಾಗಿ ಇದನ್ನು ಮತ್ತೊಂದು ಅಪಸ್ಮಾರ ನಿರೋಧಕದೊಂದಿಗೆ ಬಳಸಲಾಗುತ್ತದೆ.

ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ಗ್ಯಾಬಪೆನ್ಟಿನ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ಗ್ಯಾಬಪೆನ್ಟಿನ್ ನೀಡುವುದನ್ನು ದಿಢೀರನೇ ನಿಲ್ಲಿಸಬೇಡಿ. ಇದರಿಂದ ನಿಮ್ಮ ಮಗುವಿನ ಫಿಟ್ಸ್ ಇನ್ನಷ್ಟು ಹೆಚ್ಚಾಗಬಹುದು.

ಗ್ಯಾಬಪೆನ್ಟಿನ್ ಯಾವ ರೂಪದಲ್ಲಿ ಲಭ್ಯವಿದೆ?

ಕ್ಯಾಪ್ಸುಲ್, ಮಾತ್ರೆಗಳು, ಮಾರ್ಪಾಡಿತ-ಬಿಡುಗಡೆ ಮಾತ್ರೆಗಳು (ಸೇವಿಸಿದ ನಂತರ ಔಷಧದ ಅಂಶವು ನಿಧಾನವಾಗಿ ಬಿಡುಗಡೆಯಾಗುತ್ತದೆ)

ಗ್ಯಾಬಪೆನ್ಟಿನ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.

ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನ ಅನುಸರಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನು ಮರೆತರೆ ಏನು ಮಾಡಬೇಕು?

ಮಾತ್ರೆಗಳು: ಒಂದು ವೇಳೆ ನಿಮಗೆ ನಾಲ್ಕು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ನಾಲ್ಕು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಮಾರ್ಪಡಿಸಿದ ಔಷಧಿ: ನೀವು ಔಷಧಿ ನೀಡಲು ಮರೆತರೆ, ಮುಂದಿನ 12 ಗಂಟೆಗಳಲ್ಲಿ ಯಾವುದೇ ಸಮಯದಲ್ಲಿ ನೀಡಬಹುದು. ಆದರೆ, ಈ ಸಮಯವು ಮೀರಿದರೆ, ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಗ್ಯಾಬಪೆನ್ಟಿನ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗುವು ವಾಂತಿ ಮಾಡಿಕೊಂಡರೆ ಇನ್ನೊಂದು ಡೋಸ್ ನೀಡಬೇಡಿ. ಒಂದು ವೇಳೆ ಮಗುವು ಔಷಧಿ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಗ್ಯಾಬಪೆನ್ಟಿನ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಗ್ಯಾಬಪೆನ್ಟಿನ್ ನೀಡಿ.ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ

ಔಷಧಿಯನ್ನು ಹೇಗೆ ನೀಡಬೇಕು?“ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ಕ್ಯಾಪ್ಸುಲ್ಗಳು: ನಿಮ್ಮ ಮಗುವಿಗೆ ಕ್ಯಾಪ್ಸುಲನ್ನು ನುಂಗಲು ಸಾಧ್ಯವಾಗದಿದ್ದರೆ, ಒಂದು ಚಮಚ ಮೊಸರು ಅಥವಾ ರಸಕ್ಕೆ ಕ್ಯಾಪ್ಸುಲ್ ಅಂಶವನ್ನು ಹಾಕಿ ಸಂಪೂರ್ಣವಾಗಿ ಸೇವಿಸಲು ಹೇಳಿ.

ಮಾರ್ಪಡಿಸಿದ ಔಷಧಿ: ಇದನ್ನು ಪುಡಿ ಮಾಡಿ ನೀಡಬಾರದು. ಹಾಗೆ ಮಾಡಿದಲ್ಲಿ ಔಷಧಿಯು ತನ್ನ ಉದ್ದೇಶವನ್ನೇ ಕಳೆದುಕೊಳ್ಳುತ್ತದೆ. ಬದಲಾಗಿ, ಸಂಪೂರ್ಣವಾಗಿ ನುಂಗಬೇಕು.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ,ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು. ಅಡ್ಡಪರಿಣಾಮಗಳನ್ನು ಕುರಿತು ಮಾಹಿತಿ ಕೈಪಿಡಿಯನ್ನು ಓದಿ.

ನೀವು ಗಮನಿಸಬೇಕಾದ ಅಡ್ಡ ಪರಿಣಾಮಗಳು – ಅಪರೂಪ

ಔಷಧಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಅರೆನಿದ್ರಾವಸ್ಥೆ ಅಥವಾ ಅತಿ ಎನಿಸುವಷ್ಟು ನಿದ್ರೆಯು ಸಾಮಾನ್ಯವಾಗಿ ಕಂಡು ಬರುವ ಅಡ್ಡಪರಿಣಾಮಗಳು. ಆದರೆ, ನಿಮ್ಮ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಇವು ಕಡಿಮೆಯಾಗುತ್ತವೆ. ಸ್ವಲ್ಪ ದಿನಗಳ ನಂತರವೂ ಸಮಸ್ಯೆಯಿದ್ದಲ್ಲಿ ಅಥವಾ ನಿಮಗೆ ಆತಂಕವಿದ್ದಲ್ಲಿ ವೈದ್ಯರನ್ನು ಸಂಪರ್ಕಿಸಿ.

ತಲೆನೋವು, ಕಿರಿಕಿರಿ ಎನಿಸುವುದು ಕೂಡ ಅಪರೂಪವಾಗಿ ಕಂಡು ಬರುವ ಅಡ್ಡಪರಿಣಾಮಗಳು

ನೀವು ತಿಳಿದುಕೊಂಡಿರಬೇಕಾದ ಇತರೆ ಅಡ್ಡಪರಿಣಾಮಗಳು

ಔಷಧಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಮಗುವಿನಲ್ಲಿ ಅಡ್ಡಪರಿಣಾಮಗಳು ಉಂಟಾಗಬಹುದು. ಮೊದಲೇ ತಿಳಿಸಿದಂತೆ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಇವು ಕಡಿಮೆಯಾಗುತ್ತವೆ. ವೈದ್ಯರ ಸಲಹೆಯಂತೆ ಗ್ಯಾಬಪೆನ್ಟಿನ್ ನೀಡುವುದನ್ನು ಮುಂದುವರೆಸಿ.

• ಮಗುವಿಗೆ ವಾಂತಿಯ ಸಂವೇದನೆ ಉಂಟಾಗಬಹುದು ಅಥವಾ ವಾಂತಿಯಾಗಬಹುದು. ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಗ್ಯಾಬಪೆನ್ಟಿನ್ ನೀಡಿ, ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋದಲ್ಲಿ ಈ ಅಡ್ಡಪರಿಣಾಮವನ್ನು ತಡೆಗಟ್ಟಬಹುದು.

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಗ್ಯಾಬಪೆನ್ಟಿನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

• ಪ್ಯಾರಾಸಿಟಮೆಲ್ ಅಥವಾ ಇಬುಪ್ರೊಫೆನ್‌ವುಳ್ಳ ಔಷಧಿಗಳು, ಆಂಟಿಬಯಾಟಿಕ್ಸ್ ಅಥವಾ ಇತರೆ ಸಾಮಾನ್ಯ ಔಷಧಿಗಳನ್ನು ನಿಮ್ಮ ಮಗುವಿಗೆ ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

• ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.

• ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರೆ ಔಷಧಿಗಳು, ಗ್ಯಾಬಪೆನ್ಟಿನ್ ನಷ್ಟೇ ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಅಥವಾ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಾದರೆ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದರೆ, ವೈದ್ಯರನ್ನ ಸಂಪರ್ಕಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು

• ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್ ನಲ್ಲಿ ಇಡುವ ಅವಶ್ಯಕತೆ ಇಲ್ಲ.

• ಮಕ್ಕಳ ಕಣ್ಣಿಗೆ ಕಾಣಿಸದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.

• ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore