Dr C P Ravikumar

ಲ್ಯಾಮೋಟ್ರಿಜೈನ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ

MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)

ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ಹೆಸರುಗಳು:

ಮಾತ್ರೆಗಳು: ಲ್ಯಾಮೆಜ್, ಲ್ಯಾಮಿಕ್ಟಲ್, ಲ್ಯಾಮೆಟೆಕ್

ನಿಧಾನಗತಿಯ ಬಿಡುಗಡೆ: ಲ್ಯಾಮೆಜ್ ಡಿಟಿ

ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು

ಲ್ಯಾಮೋಟ್ರಿಜೈನ್ ಎಂಬುದು ಅಪಸ್ಮಾರದ ಚಿಕಿತ್ಸೆಯಲ್ಲಿ ವಿವಿಧ ಬಗೆಯ ಸೆಳೆವುಗಳನ್ನು (ಫಿಟ್ಸ್) ನಿಯಂತ್ರಿಸಲು ಬಳಸಲಾಗುವ ಔಷಧಿ. ಫೋಕಲ್ ಸೆಳೆವು , ಟಾನಿಕ್-ಕ್ಲಾನಿಕ್ ಸೆಳೆವು, ಅನುಪಸ್ಥಿತಿ ಸೆಳೆವು ಮತ್ತು ಲೆನಾಕ್ಸ್ ಗ್ಯಾಸ್ಟುವಾಟ್ ಸಿಂಡ್ರೋಮ್‌ನಂತಹ ಕೆಲವು ನಿರ್ದಿಷ್ಟ ರೋಗಲಕ್ಷಣಗಳನ್ನು ನಿಯಂತ್ರಿಸಲು ಇದನ್ನು ಬಳಸಲಾಗುತ್ತದೆ.

ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ಲ್ಯಾಮೋಟ್ರಿಜೈನ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ನಿಮ್ಮ ಮಗುವಿಗೆ ಲ್ಯಾಮೋಟ್ರಿಜೈನ್ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.

ಲ್ಯಾಮೋಟ್ರಿಜೈನ್ ಯಾವ ರೂಪದಲ್ಲಿ ಲಭ್ಯವಿದೆ?

ಮಾತ್ರೆಗಳು. ಔಷಧಿಯ ಅಂಶವನ್ನು ನಿಧಾನವಾಗಿ ಬಿಡುಗಡೆ ಮಾಡುವ ಮಾತ್ರೆಗಳು (ಸೇವಿಸಿದ ನಂತರ ನಿಧಾನವಾಗಿ ಔಷಧಿಯ ಅಂಶವು ದೇಹಕ್ಕೆ ಸೇರುತ್ತದೆ).

ಲ್ಯಾಮೋಟ್ರಿಜೈನ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.

ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನ ಅನುಸರಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ಮಾತ್ರೆಗಳು ಮತ್ತು ದ್ರವೌಷಧಿ: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ

ಮಾರ್ಪಡಿಸಿದ ಔಷಧಿ: ನೀವು ಔಷಧಿ ನೀಡಲು ಮರೆತರೆ, ಮುಂದಿನ ಹನ್ನೆರೆಡು ಗಂಟೆಗಳಲ್ಲಿ ಯಾವುದೇ ಸಮಯದಲ್ಲಿ ನೀಡಬಹುದು. ಆದರೆ, ಈ ಸಮಯವು ಮೀರಿದರೆ, ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಲ್ಯಾಮೋಟ್ರಿಜೈನ್ ನೀಡಬೇಡಿ

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯಪ್ರಮಾಣಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಲ್ಯಾಮೋಟ್ರಿಜೈನ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಲ್ಯಾಮೋಟ್ರಿಜೈನ್ ನೀಡಿ.. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನು ನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು?“ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ಮಾರ್ಪಡಿಸಿದ ಔಷಧಿ: ಇದನ್ನು ಪುಡಿ ಮಾಡಿ ನೀಡಬಾರದು. ಹಾಗೆ ಮಾಡಿದಲ್ಲಿ ಔಷಧಿಯು ತನ್ನ ಉದ್ದೇಶವನ್ನೇ ಕಳೆದುಕೊಳ್ಳುತ್ತದೆ. ಬದಲಾಗಿ, ಸಂಪೂರ್ಣವಾಗಿ ನುಂಗಬೇಕು. ನೀವು ಪುಡಿ ಮಾಡಿಯೇ ಸೇವಿಸಬೇಕೆಂದಿದ್ದಲ್ಲಿ, ರೂಢಿಯಲ್ಲಿರುವ ಇತರೆ ಅಥವಾ ಸಾಮಾನ್ಯ ಮಾತ್ರೆಯನ್ನು ತೆಗೆದುಕೊಳ್ಳಿ.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ,ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು(ಅಡ್ಡಪರಿಣಾಮಗಳು) ಉಂಟು ಮಾಡಬಹುದು.

ನೀವು ಗಮನಿಸಬೇಕಾದ ಅಡ್ಡಪರಿಣಾಮಗಳು

• ಅತಿ ಎನಿಸುವಷ್ಟು ನಿದ್ರೆ ಅಥವಾ ನಿದ್ರಾಹೀನತೆ

• ಭಾವನಾತ್ಮಕ ಸಮಸ್ಯೆಗಳು – ನಿದ್ರಾಭಂಗ ಮಾಡುವಂತಹ ಕನಸುಗಳು

• ವರ್ತನೆಯಲ್ಲಿ ಬದಲಾವಣೆ

• ಕಡಿಮೆ ಹಸಿವು

ಮಗುವು ಔಷಧಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಈ ಅಡ್ಡಪರಿಣಾಮಗಳು. ಉಂಟಾಗಬಹುದು. ಆದರೆ, ನಿಮ್ಮ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಅಥವಾ ಒಂದು ವಾರಗಳಷ್ಟರಲ್ಲಿ ಇವು ಕಡಿಮೆಯಾಗುತ್ತವೆ. ನಿಮ್ಮ ವೈದ್ಯರ ಸಲಹೆಯಂತೆ ಲ್ಯಾಮೋಟ್ರಿಜೈನ್ ನೀಡುವುದನ್ನು ಮುಂದುವರೆಸಿ.

ಯಕೃತ್ತಿನ ಕಾಯಿಲೆ: ಯಾವುದೇ ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರೆ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ ಉಂಟಾದರೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದರೆ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.

ನಿಮ್ಮನ್ನು ಚಿಂತೆಗೀಡು ಮಾಡುವ ಇತರೆ ಗಂಭೀರ ಅಡ್ಡಪರಿಣಾಮಗಳು

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ. ಮಗುವಿನ ಚರ್ಮದ ಮೇಲೆ ಗುಳ್ಳೆಗಳು ಅಥವಾ ಬಾಯಿ ಅಥವಾ ಜನನಾಂಗದಲ್ಲಿ ದದ್ದುಗಳು ಕಂಡು ಬಂದರೆ, ತಕ್ಷಣವೇ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಇಷ್ಟೆಲ್ಲಾ ಅಡ್ಡಪರಿಣಾಮಗಳ ಹೊರತಾಗಿಯೂ, ಲ್ಯಾಮೋಟ್ರಿಜೈನ್ ಬಹಳ ಪರಿಣಾಮಕಾರಿಯಾದ ಸೆಳೆವು ನಿರೋಧಕ ಔಷಧವಾಗಿದೆ ಮತ್ತು ಇದು ಮಗುವಿನ ಎಚ್ಚರಿಕೆ, ನಡವಳಿಕೆ ಮತ್ತು ಕಲಿಕೆಯ ಸಾಮರ್ಥ್ಯದ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ.

ಲ್ಯಾಮೋಟ್ರಿಜೈನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

• ಪ್ಯಾರಾಸಿಟಮೆಲ್ ಅಥವಾ ಇಬುಪ್ರೊಫೆನ್‌ವುಳ್ಳ ಔಷಧಿಗಳು, ಆಂಟಿಬಯಾಟಿಕ್ಸ್ ಅಥವಾ ಇತರೆ ಸಾಮಾನ್ಯ ಔಷಧಿಗಳನ್ನು ನಿಮ್ಮ ಮಗುವಿಗೆ ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

• ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.

• ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರೆ ಔಷಧಿಗಳು, ಲ್ಯಾಮೋಟ್ರಿಜೈನ್ ನಷ್ಟೇ ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಅಥವಾ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಾದರೆ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದರೆ, ವೈದ್ಯರನ್ನ ಸಂಪರ್ಕಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು…

• ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್ ನಲ್ಲಿ ಇಡುವ ಅವಶ್ಯಕತೆ ಇಲ್ಲ.

• ಮಕ್ಕಳ ಕಣ್ಣಿಗೆ ಕಾಣಿಸದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.

• ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Picture of Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore