ಕಾರ್ಬಮಾಜೆಪೈನ್
ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ
ಡಾ ಸಿ ಪಿ ರವಿ ಕುಮಾರ್
ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)
ಬ್ರ್ಯಾಂಡ್ ಹೆಸರುಗಳು
ಮಾತ್ರೆಗಳು: ಜೆಪ್ಟಾಲ್ , ಜೆನ್
ಸಿರಪ್ : ಟೆಗ್ರಿಟಲ್
ನಿಧಾನಗತಿಯ ಬಿಡುಗಡೆ: ಜೆಪ್ಟಾಲ್ ಸಿಆರ್
“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”
ಕಾರ್ಬಮಾಜೆಪೈನ್ ಎಂಬುದು ಅಪಸ್ಮಾರದ ಚಿಕಿತ್ಸೆಯಲ್ಲಿ ವಿವಿಧ ಬಗೆಯ ಸೆಳೆವುಗಳ (ಫಿಟ್ಸ್) ನಿಯಂತ್ರಣಕ್ಕಾಗಿ ಬಳಸುವ ಔಷಧಿ. ಈ ಔಷಧಿಯನ್ನು ಅರೆ ಸೆಳೆವು (ಫಿಟ್ಸ್), ಕೆಲವೊಮ್ಮೆ ಟಾನಿಕ್-ಕ್ಲೊನಿಕ್ ಸೆಳೆವಿನ ಚಿಕಿತ್ಸೆಯಲ್ಲಿ ಬಳಸುತ್ತಾರೆ. ಕೆಲವೊಮ್ಮೆ ಅಪಸ್ಮಾರವಲ್ಲದ ಸ್ಥಿತಿಗಳಾದ ಟ್ರಿಗಿಮಿನಾಲ್ ನ್ಯೂರಾಲ್ಗಿಯಾದ ಚಿಕಿತ್ಸೆಯಲ್ಲಿಲೂ ಸಹ ಬಳಸಲಾಗುತ್ತದೆ.
ಇದು ಆಕ್ಸ್ ಕಾರ್ಬಜೆಪೈನ್‌ನ ಮತ್ತು ಎಸ್ಲಿಕಾರ್ಬಜೈಪನ್ ಔಷಧಿಗಳ ಹಿರಿಯ ಸಹೋದರ ಎಂದೇ ಹೇಳಬಹುದು. ಈ ಕುಟುಂಬದ ಔಷಧಿಗಳ ಅತಿದೊಡ್ಡ ಅಡ್ಡಪರಿಣಾಮವೆಂದರೆ ಚರ್ಮದ ತೀವ್ರ ಸಮಸ್ಯೆ ಸ್ಟೀವನ್ಸ್ ಜಾನ್ಸನ್) ಸಿಂಡ್ರೋಮ್ (. ಕೆಳಗೆ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದೆ.
ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?
ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗು ಕಾರ್ಬಮಾಜೆಪೈನ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.
ನಿಮ್ಮ ಮಗುವಿಗೆ ಕಾರ್ಬಮಾಜೆಪೈನ್ ನೀಡುವುದನ್ನುದಿಢೀರನೆನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.
ಕಾರ್ಬಮಾಜೆಪೈನ್ ಯಾವ ರೂಪದಲ್ಲಿ ಲಭ್ಯವಿದೆ?
ದ್ರವ, ಮಾತ್ರೆ ರೂಪದಲ್ಲಿ, ಮತ್ತು ಮಾರ್ಪಡಿಸಿದ ಮಾತ್ರೆಗಳ ರೂಪದಲ್ಲಿ (ಮಾತ್ರೆ ನುಂಗಿದ ಬಳಿಕ ಔಷಧಿಯು ನಿಧಾನವಾಗಿ ರಕ್ತದೊಳಗೆ ಬಿಡುಗಡೆಯಾಗುತ್ತದೆ)
ಕಾರ್ಬಮಾಜೆಪೈನ್ ಅನ್ನು ಯಾವಾಗ ನೀಡಬೇಕು?
ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ
10-12 ಗಂಟೆಗಳ ಅಂತರವಿರಲಿ.
ಉದಾಹರಣೆಗೆ, ಬೆಳಗ್ಗೆ
7 ರಿಂದ
8 ಗಂಟೆ ನಡುವೆ ಅಥವಾ ಸಂಜೆ
7 ರಿಂದ
8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನು ಅನುಸರಿಸಿ.
ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.
ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?
ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.
ಮಾರ್ಪಾಡಿತ ಬಿಡುಗಡೆ: ಒಂದು ವೇಳೆ ನೀವು ಡೋಸ್ ನೀಡುವುದು ಮರೆತರೆ ಅದನ್ನು ಮುಂದಿನ ಎಂಟು ಗಂಟೆಗಳ ಒಳಗಾಗಿ ಯಾವಾಗ ಬೇಕಾದರೂ ನೀಡಬಹುದು. ಈ ಸಮಯ ಮೀರಿದ್ದರೆ, ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.
ಯಾವುದೇ ಕಾರಣಕ್ಕೂ ಎರಡು ಡೋಸ್ ಕಾರ್ಬಮಾಜೆಪೈನ್ ನೀಡಬೇಡಿ.
ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು
ನೀಡುವುದು ಬೇಡ.
ಔಷಧಿಯ ಪ್ರಮಾಣ ಎಷ್ಟಿರಬೇಕು?
ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ
ಕಾರ್ಬಮಾಜೆಪೈನ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.
ಸಣ್ಣ ಪ್ರಮಾಣದಲ್ಲಿ
ಕಾರ್ಬಮಾಜೆಪೈನ್ ನೀಡಲು ಪ್ರಾರಂಭಿಸಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.
ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ
ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.
ಔಷಧಿಯನ್ನು ಹೇಗೆ ನೀಡಬೇಕು? ?“ ಔಷಧಿಗಳನ್ನು ನೀಡುವುದು”
ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.
ದ್ರವ ಅಥವಾ ಸಿರಪ್: ಓರಲ್ ಸಿರಿಂಜ್ ಅಥವಾ ಔಷಧಿ ಚಮಚದಿಂದ
ಸರಿಯಾದ ಪ್ರಮಾಣದ ಔಷಧಿಯನ್ನು ಅಳತೆ ಮಾಡಿಕೊಳ್ಳಿ. ಇದನ್ನು ಔಷಧಿ ಅಂಗಡಿಗಳಲ್ಲಿ ಖರೀದಿಸಬಹುದು. ಅಡುಗೆಮನೆಯಲ್ಲಿ ಬಳಸುವ ಟೀ ಚಮಚವನ್ನು ಬಳಸಬೇಡಿ. ಇದರಿಂದ ಸರಿಯಾದ ಅಳತೆ ಸಿಗುವುದಿಲ್ಲ.
ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು.
ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”
ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು.
ಅಡ್ಡ ಪರಿಣಾಮಗಳನ್ನು ಕುರಿತು ಮಾಹಿತಿ ಪತ್ರವನ್ನು ದಯವಿಟ್ಟು ಓದಿ.
ನೀವು ಎಚ್ಚರವಹಿಸಬೇಕಾದ ಅಡ್ಡ ಪರಿಣಾಮಗಳು
ಈ ಔಷಧಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ ನಂತರ ಅತಿಯಾದ ನಿದ್ರೆ (ಅರೆನಿದ್ರಾವಸ್ಥೆ), ಎರಡೆರಡಾಗಿ ಕಾಣುವುದು, ಕುಡುಕ ನಡಿಗೆ (ಅಟಾಕ್ಸಿಯಾ) ಸಂಭವಿಸಬಹುದು. ಇದು ಸಾಮಾನ್ಯವಾಗಿ ಕೆಲವೇ ದಿನಗಳಲ್ಲಿ ಸರಿಹೋಗುತ್ತದೆ. ಆದರೆ, ಎರಡು ವಾರಗಳ ನಂತರವೂ ಯಾವುದೇ ಸುಧಾರಣೆ ಕಂಡುಬರದಿದ್ದರೆ, ನಿಮ್ಮ ವೈದ್ಯರೊಂದಿಗೆ ಚರ್ಚಿಸಿ.
ಹೆಚ್ಚಿನ ಡೋಸ್ ನೀಡಿದಾಗ ಅಪರೂಪವಾಗಿ ಲಘುವಾದ ಕಂಪನ ಅಥವಾ ಕೈಯಲ್ಲಿ ನಡುಕ ಉಂಟಾಗಬಹುದು ಹಾಗೂ ಡೋಸ್ ಕಡಿಮೆ ಮಾಡಿದಂತೆ ಅದು ಮಾಯವಾಗುತ್ತದೆ.
ಕೆಲವೊಮ್ಮೆ ಕಾರ್ಬಮಾಜೆಪೈನ್, ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ರಕ್ತಕಣಗಳು ಕ್ಷೀಣಿಸಲು ಕಾರಣವಾಗಬಹುದು. ಇದರಿಂದ ಅಪರೂಪದಲ್ಲಿ ಕೆಲವೊಮ್ಮೆ ತೊಂದರೆ ಉಂಟಾಗಬಹುದು. ನಿಮ್ಮ ಮಗುವಿಗೆ ರಕ್ತಸ್ರಾವ ಅಥವಾ ಮೈಮೇಲೆ ಗುಳ್ಳೆಗಳು ಉಂಟಾದರೆ ನೀವು ನಿಮ್ಮ ವೈದ್ಯರನ್ನು ಸಂಪರ್ಕಿಸಬೇಕು. ಅವರು ರಕ್ತ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತಾರೆ.
ಯಕೃತ್ತಿನ ಕಾಯಿಲೆ: ಯಕೃತ್ತಿನ ಕಿಣ್ವಗಳ ಬಗ್ಗೆ ನಿಯಮಿತವಾಗಿ ಲಕ್ಷ್ಯವಿಡಬೇಕು. ಪಿತ್ತಜನಕಾಂಗದಲ್ಲಿ ಯಾವುದೇ ವ್ಯತ್ಯಾಸಗಳಾಗುವುದು ಕಂಡು ಬಂದಲ್ಲಿ, ತಕ್ಷಣವೇ ಔಷಧ ಸೇವನೆಯನ್ನು ನಿಲ್ಲಿಸಬೇಕು. ಯಾವುದೇ ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರೆ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ ಉಂಟಾದರೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದರೆ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.
ನಿಮ್ಮ ಚಿಂತೆಗೆ ಕಾರಣವಾಗಬಹುದಾದ ಅಡ್ಡಪರಿಣಾಮಗಳು
ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.
ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.
ಈ ಎಲ್ಲಾ ಅಡ್ಡಪರಿಣಾಮಗಳ ಹೊರತಾಗಿಯೂ
ಕಾರ್ಬಮಾಜೆಪೈನ್ ಅಪಸ್ಮಾರಕ್ಕೆ ಪರಿಣಾಮಕಾರಿಯಾದ ಔಷಧಿ. ಹಾಗೂ ಮಗುವಿನ ಎಚ್ಚರ, ವರ್ತನೆ ಮತ್ತು ಸಾಮರ್ಥ್ಯಗಳ ಮೇಲೆ ತುಂಬಾ ಕಡಿಮೆ ಪರಿಣಾಮ ಹೊಂದಿದೆ.
ಮೇಲೆ ವಿವರಿಸಿದ ಗಂಭೀರ ಪರಿಣಾಮವನ್ನು ನಾವು ತಡೆಗಟ್ಟಬಹುದೇ?
ವಂಶವಾಹಿ ಎಚ್‌ಎಲ್‌ಎ – ಬಿ 1502 ಹೊಂದಿರುವವರಿಗೆ ಈ ಮೇಲಿನ ಅಡ್ಡ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿಗೆ ಇದ್ದು. ಆದರೆ, ಈ ಸಾಧ್ಯತೆಯನ್ನು ಪರೀಕ್ಷಿಸಲು ಅವಕಾಶವಿದೆ. ಅಂತಹ ಸಂದರ್ಭಗಳಲ್ಲಿ ಇದರ ಬಳಕೆಯನ್ನು ತಪ್ಪಿಸಬಹುದು.
ಕಾರ್ಬಮಾಜೆಪೈನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?
ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?
ಔಷಧಿಯನ್ನು
…
- ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್‌ನಲ್ಲಿ ಇಡುವ ಅವಶ್ಯಕತೆ ಇಲ್ಲ.
- ಮಕ್ಕಳು ಔಷಧಿಯನ್ನು ನೋಡದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.
- ಖರೀದಿಸಿ ತಂದ ಬಾಕ್ಸ್ ನಲ್ಲಿಯೇ ಇಡಿ.
ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.
ಉಲ್ಲೇಖಗಳು:
- ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
- ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
- ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
- ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov