ಡಾ ಸಿ ಪಿ ರವಿ ಕುಮಾರ್
ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)
ಬ್ರ್ಯಾಂಡ್ ಹೆಸರುಗಳು: ಬ್ರ‍್ಯಾಂಡ್ ಹೆಸರು: ಭಾರತದಲ್ಲಿ ಏಪ್ರಿಲ್ ನ ಹೊತ್ತಿಗೆ ಈ ಔಷಧಿಯು ಲಭ್ಯವಿಲ್ಲ.
“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”
ಸ್ಟಿರಿಪೆಂಟಾಲ್ ಎನ್ನುವುದು ಆನುವಂಶಿಕ ಸ್ಥಿತಿಗಳಲ್ಲೊಂದಾದ ಡ್ರಾವೆಟ್ ಸಿಂಡ್ರೋಮ್ ಚಿಕಿತ್ಸೆಯಲ್ಲಿ ನಿರ್ದಿಷ್ಟವಾಗಿ ಬಳಸುವ ಒಂದು ಔಷಧವಾಗಿದ್ದು, ಇದನ್ನು ಹೆಚ್ಚಾಗಿ ಆಂಟಿ-ಎಪಿಲೆಪ್ಟಿಕ್ ಔಷಧಿಗಳೊಂದಿಗೆ ಹೆಚ್ಚುವರಿ ಔಷಧಿಯಾಗಿ ಬಳಸಲಾಗುತ್ತದೆ.
ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?
ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ಸ್ಟಿರಿಪೆಂಟಾಲ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.
ನಿಮ್ಮ ಮಗುವಿಗೆ ಸ್ಟಿರಿಪೆಂಟಾಲ್ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.
ಸ್ಟಿರಿಪೆಂಟಾಲ್ ಯಾವ ರೂಪದಲ್ಲಿ ಲಭ್ಯವಿದೆ?
ಕ್ಯಾಪ್ಸುಲ್ ಮತ್ತು ಸ್ಯಾಚೆಟ್ಗಳು (ಸಣ್ಣ ಪೊಟ್ಟಣಗಳು)
c ಅನ್ನು ಯಾವಾಗ ನೀಡಬೇಕು?
ದಿನಕ್ಕೆ ಎರಡು ಬಾರಿ; ಬೆಳಿಗ್ಗೆ ಮತ್ತು ಸಂಜೆ. ಆದರೆ, ಕನಿಷ್ಟ 10-12 ಗಂಟೆಗಳ ಅಂತರದಲ್ಲಿ
ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು
ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.
ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?
ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.
ಯಾವುದೇ ಕಾರಣಕ್ಕೂ ಎರಡು ಡೋಸ್ ಸ್ಟಿರಿಪೆಂಟಾಲ್ ನೀಡಬೇಡಿ.
ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.
ಔಷಧಿಯ ಪ್ರಮಾಣ ಎಷ್ಟಿರಬೇಕು?
ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಸ್ಟಿರಿಪೆಂಟಾಲ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.
ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಸ್ಟಿರಿಪೆಂಟಾಲ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನು ನಿಮ್ಮ ವೈದ್ಯರು ವಿವರಿಸುತ್ತಾರೆ.
ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ
ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.
ಔಷಧಿಯನ್ನು ಹೇಗೆ ನೀಡಬೇಕು? ? “ಔಷಧಿಗಳನ್ನು ನೀಡುವುದು”
ಮಾತ್ರೆಗಳು/ ಕ್ಯಾಪ್ಸುಲ್: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು, ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.
ಸ್ಯಾಚೆಟ್: ಇದನ್ನು ನೀರು ಅಥವಾ ಹಣ್ಣಿನ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.
ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡ ಪರಿಣಾಮಗಳು”
ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು.
ನಿಮ್ಮನ್ನು ಚಿಂತೆಗೀಡುವ ಅಡ್ಡಪರಿಣಾಮಗಳು
ಸ್ಟಿರಿಪೆಂಟಾಲ್ ಸೇವನೆಯು ತುಂಬಾ ಕಡಿಮೆ/ ಸೌಮ್ಯ ಮಟ್ಟದ ಅಡ್ಡ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದರೆ, ಅದರಿಂದಾಗಿ ಸ್ಟಿರಿಪೆಂಟಾಲ್ ಸೇವನೆಯನ್ನು ನಿಲ್ಲಿಸುವ ಅಗತ್ಯವಿಲ್ಲ. ¸
ನೀವು ತಿಳಿದುಕೊಳ್ಳಬೇಕಾದ ಇತರೆ ಅಡ್ಡಪರಿಣಾಮಗಳು
ಮಗುವು ಸ್ಟಿರಿಪೆಂಟಾಲ್ ತೆಗೆದುಕೊಳ್ಳಲಯ ಪ್ರಾರಂಭಿಸಿದ ಶುರುವಿನಲ್ಲಿ ಈ ಕೆಳಗಿನ ಅಡ್ಡಪರಿಣಾಮಗಳು ಉಂಟಾಗಬಹುದು. ದಿನಗಳು ಕಳೆದಂತೆ, ಸುಮಾರು ಒಂದು ವಾರವಾಗುವಷ್ಟರಲ್ಲಿ. ಅಥವಾ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಎಲ್ಲವು ಸರಿ ಹೋಗುತ್ತದೆ. ವೈದ್ಯರ ಸಲಹೆಯಂತೆ ಸ್ಟಿರಿಪೆಂಟಾಲ್ ನೀಡುವುದನ್ನು ಮುಂದುವರೆಸಿ.
ಮಗುವಿಗೆ ದದ್ದುಗಳು ಉಂಟಾದಲ್ಲಿ, ತಕ್ಷಣ ಔಷಧ ನೀಡುವುದನ್ನು ನಿಲ್ಲಿಸಿ ವೈದ್ಯರ ಸಲಹೆ ಪಡೆಯಿರಿ.
ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ, ನಿಮ್ಮ ವೈದ್ಯರನ್ನು ಸಂಪರ್ಕಿಸಿ.
ಮೇಲಿನ ಅಡ್ಡಪರಿಣಾಮಗಳನ್ನು ಹೊರತುಪಡಿಸಿ, ಡ್ರಾವೆಟ್ ಸಿಂಢ್ರೋಮ್ ನ ಚಿಕಿತ್ಸೆಗೆ ಸ್ಟಿರಿಪೆಂಟಾಲ್ ಉತ್ತಮ ಅಪಸ್ಮಾರ ನಿರೋಧಕ ಔಷಧವಾಗಿದೆ,
ಸ್ಟಿರಿಪೆಂಟಾಲ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?
ಔಷಧಿಯನ್ನ ಎಲ್ಲಿ ಸಂರಕ್ಷಿಸಿ ಇಡಬೇಕು?
ಔಷಧಿಯನ್ನು…
ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.
ಉಲ್ಲೇಖಗಳು:
CONSULTANT – PEDIATRIC NEUROLOGY
Aster CMI Hospital, Bangalore