ಡಾ ಸಿ ಪಿ ರವಿ ಕುಮಾರ್
ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)
ಫೆಲ್ಬಮೇಟ್ ಎಂಬುದು ಅರೆ ಅಪಸ್ಮಾರದ (ಮೆದುಳಿನಲ್ಲಿ ಉಂಟಾಗುವಂತಹುದು) ಚಿಕಿತ್ಸೆಯಲ್ಲಿ ಬಳಸುವ ಔಷಧವಾಗಿದೆ. ಪ್ರಸ್ತುತ ಕೈಪಿಡಿಯು ಪ್ರಕಟಗೊಳ್ಳುವ ವೇಳೆಯಲ್ಲಿ ಭಾರತ ಉಪಖಂಡದಲ್ಲಿ ಮಾರಾಟ ಮಾಡಲಾಗುವುದಿಲ್ಲ.
ಇತರ ಔಷಧಿಗಳು ಫಿಟ್ಸ್ ನ್ನು ನಿಯಂತ್ರಿಸಲು ವಿಫಲವಾದಾಗ ಅಪಸ್ಮಾರದ ತೀವ್ರ ಸ್ವರೂಪಗಳಲ್ಲೊಂದಾದ ಲೆನೊಕ್ಸ್ ಗ್ಯಾಸ್ಟಾಟ್ ಸಿಂಡ್ರೋಮ್ ನ ಚಿಕತ್ಸೆಯಲ್ಲಿ ಇದನ್ನು ಬಳಸಲಾಗುತ್ತದೆ..
ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?
ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗು ಫೆಲ್ಬಮೇಟ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ. .
ನಿಮ್ಮ ಮಗುವಿಗೆ ಫೆಲ್ಬಮೇಟ್ ನೀಡುವುದನ್ನುದಿಢೀರನೆನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.
ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.
ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು.
ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.
ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?
ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.
ಯಾವುದೇ ಕಾರಣಕ್ಕೂ ಎರಡು ಡೋಸ್ ಫೆಲ್ಬಮೇಟ್ ನೀಡಬೇಡಿ.
ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.
ಔಷಧಿಯ ಪ್ರಮಾಣ ಎಷ್ಟಿರಬೇಕು?
ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಫೆಲ್ಬಮೇಟ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.
ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಫೆಲ್ಬಮೇಟ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. . ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.
ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ
ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.
ಔಷಧಿಯನ್ನು ಹೇಗೆ ನೀಡಬೇಕು? ?“ ಔಷಧಿಗಳನ್ನು ನೀಡುವುದು”
ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.
ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”
ಫೆಲ್ಬಮೇಟ್ ಗಂಭೀರ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ. ಇದು ಈ ಔಷಧಿಯ ದೊಡ್ಡ ತೊಂದರೆ.
ಅಪ್ಲ್ಯಾಸ್ಟಿಕ್ ರಕ್ತಹೀನತೆ, ಇದು ರಕ್ತದ ಉತ್ಪಾದನೆಯ ಗಂಭೀರ ಸಮಸ್ಯೆಯಾಗಿದ್ದು, ದೇಹವು ಎಲ್ಲಾ ರೀತಿಯ ರಕ್ತ ಕಣಗಳನ್ನು ತಯಾರಿಸುವುದನ್ನು ನಿಲ್ಲಿಸುತ್ತದೆ. ಇದು ಮಾರಣಾಂತಿಕ ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ನೀವು ಔಷಧಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ ನಂತರ ಈ ಸಮಸ್ಯೆ ಯಾವಾಗ ಬೇಕಾದರೂ ಸಂಭವಿಸಬಹುದು, ನೀವು ಈ ಔಷಧಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿದ ನಂತರವೂ ಕೆಲವು ತಿಂಗಳುಗಳವರೆಗೆ ಹೆಚ್ಚಿನ ಅಪಾಯದ ಸಾಧ್ಯತೆ ಇದ್ದೇ ಇರುತ್ತದೆ.
ಆದ್ದರಿಂದ ಈ ಔಷಧಿ ಲಭ್ಯವಿರುವ ದೇಶಗಳಲ್ಲಿ ಈ ಔಷಧಿಗಳನ್ನು ಸೂಚಿಸುವ ಮೊದಲು ಪೋಷಕರು / ವಯಸ್ಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಬೇಕು.
ಪಿತ್ತಜನಕಾಂಗದ ಕಾಯಿಲೆ: ಇತರ ಔಷಧಿಗಳಿಗೆ ಹೋಲಿಸಿದರೆ ಯಕೃತ್ತಿನ ಸಮಸ್ಯೆ ಉಂಟಾಗುವ ಅಪಾಯ ಹೆಚ್ಚು.
ನೀವು ಎಚ್ಚರವಹಿಸಬೇಕಾದ ಇತರೆ ಅಡ್ಡ ಪರಿಣಾಮಗಳು
ನಿಮ್ಮ ಮಗುವಿಗೆ ಫೆಲ್ಬಮೇಟ್ ನೀಡಲು ಶುರು ಮಾಡಿದ ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಸ್ವಲ್ಪ ಸ್ವಲ್ಪವೇ ಔಷಧಿಯ ಪ್ರಮಾಣವನ್ನು ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ, ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.
ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.
ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ
ಕ್ಲೋನಾಜೆಪಮ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?
ನೀವು ಮಗುವಿಗೆ ಪ್ಯಾರಸಿಟಮಾಲ್ ಅಥವಾ ಐಬುಪ್ರೊಫೇನ್ ಔಷಧಿಗಳನ್ನು ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ಮಗುವಿಗೆ ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.
ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?
ಔಷಧಿಯನ್ನು…
ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.
ಉಲ್ಲೇಖಗಳು:
CONSULTANT – PEDIATRIC NEUROLOGY
Aster CMI Hospital, Bangalore