Dr C P Ravikumar

ಲ್ಯಾಕೋಸಮೈಡ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

ಲ್ಯಾಕೋಸಮೈಡ್ ಎಂಬುದು ಅಪಸ್ಮಾರದ ಚಿಕಿತ್ಸೆಯಲ್ಲಿ ಬಳಸುವ ಔಷಧವಾಗಿದ್ದು, ಮುಖ್ಯವಾಗಿ ಸೆಳೆವು ಮತ್ತು ಅಪಸ್ಮಾರವನ್ನು ನಿಯಂತ್ರಿಸಲು ಬಳಸಲಾಗುತ್ತದೆ. ಇದನ್ನು ಏಕ ಔಷಧವಾಗಿ ಹಾಗೂ ಕೆಲವೊಮ್ಮೆ ಮತ್ತೊಂದು ಅಪಸ್ಮಾರ ನಿರೋಧಕ ಔಷಧದೊಂದಿಗೆ ಹೆಚ್ಚುವರಿಯಾಗಿ ಬಳಸಲಾಗುತ್ತದೆ.

ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ಲ್ಯಾಕೋಸಮೈಡ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ನಿಮ್ಮ ಮಗುವಿಗೆ ಲ್ಯಾಕೋಸಮೈಡ್ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.

ಲ್ಯಾಕೋಸಮೈಡ್ ಯಾವ ರೂಪದಲ್ಲಿ ಲಭ್ಯವಿದೆ?

ದ್ರವ ಮತ್ತು ಮಾತ್ರೆಗಳ ರೂಪದಲ್ಲಿ

ಲ್ಯಾಕೋಸಮೈಡ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.

ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನ ಅನುಸರಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ಮಾತ್ರೆಗಳು ಮತ್ತು ದ್ರವೌಷಧಿ: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಲ್ಯಾಕೋಸಮೈಡ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಲ್ಯಾಕೋಸಮೈಡ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಲ್ಯಾಕೋಸಮೈಡ್. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು? ? “ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿ ಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ದ್ರವ ಅಥವಾ ಸಿರಪ್: ಓರಲ್ ಸಿರಿಂಜ್ ಅಥವಾ ಔಷಧಿ ಚಮಚದಿಂದ ಸರಿಯಾದ ಪ್ರಮಾಣದ ಔಷಧಿಯನ್ನು ಅಳತೆ ಮಾಡಿಕೊಳ್ಳಿ. ಇದನ್ನು ಔಷಧಿ ಅಂಗಡಿಗಳಲ್ಲಿ ಖರೀದಿಸಬಹುದು. ಅಡುಗೆಮನೆಯಲ್ಲಿ ಬಳಸುವ ಟೀ ಚಮಚವನ್ನುಬಳಸಬೇಡಿ. ಇದರಿಂದ ಸರಿಯಾದ ಅಳತೆ ಸಿಗುವುದಿಲ್ಲ.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ,ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು. ಅಡ್ಡಪರಿಣಾಮಗಳನ್ನು ಕುರಿತು ಮಾಹಿತಿ ಕೈಪಿಡಿಯನ್ನು ಓದಿ.

ನಿಮ್ಮನ್ನು ಚಿಂತೆಗೀಡುವ ಮಾಡುವ ಅಡ್ಡಪರಿಣಾಮಗಳು

ಸಾಮಾನ್ಯ ಅಡ್ಡಪರಿಣಾಮಗಳು

• ತಲೆತಿರುಗುವಿಕೆ , ವಾಂತಿಯ ಸಂವೇದನೆ

• ಅಸಹಜ ಸಮನ್ವಯ

• ಅಟಾಕ್ಸಿಯಾ ಅಸಹಜ ನಡಿಗೆ

ಔಷಧಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಅರೆನಿದ್ರಾವಸ್ಥೆ ಅಥವಾ ಅತಿ ಎನಿಸುವಷ್ಟು ನಿದ್ರೆಯು ಸಾಮಾನ್ಯವಾಗಿ ಕಂಡು ಬರುವ ಅಡ್ಡಪರಿಣಾಮಗಳು. ಆದರೆ, ನಿಮ್ಮ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಇವು ಕಡಿಮೆಯಾಗುತ್ತವೆ. ವೈದ್ಯರ ಸಲಹೆಯಂತೆ ಲ್ಯಾಕೋಸಮೈಡ್ ನೀಡುವುದನ್ನು ಮುಂದುವರೆಸಿ..

ಯಕೃತ್ತಿನ ಕಾಯಿಲೆ: ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರೆ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಉಂಟಾದರೆ ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದರೆ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.

ಹೃದಯದ ಸಮಸ್ಯೆ: ಮಗುವಿಗೆ ಹೃದಯದ ಸಮಸ್ಯೆಯಿದ್ದರೆ, ಅದರಲ್ಲೂ ಸಮಸ್ಯೆಯು ಹೃದಯ ಲಯಕ್ಕೆ ಸಂಬಂಧಿಸಿದ್ದರೆ, ಲಾಕೋಸಮೈಡ್‌ನ ಚಿಕಿತ್ಸೆಯನ್ನು ಪ್ರಾರಂಭಿಸುವ ಮೊದಲು ಇಸಿಜಿ ಸೇರಿದಂತೆ ಹೃದಯ ತಪಾಸಣೆ ಮಾಡಿಸಬೇಕಾಗುತ್ತದೆ.

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಇಷ್ಟೆಲ್ಲಾ ಅಡ್ಡಪರಿಣಾಮಗಳ ಹೊರತಾಗಿಯೂ, ಲಾಕೋಸಮೈಡ್ ಬಹಳ ಪರಿಣಾಮಕಾರಿಯಾದ ಸೆಳೆವು ನಿರೋಧಕ ಔಷಧವಾಗಿದೆ ಮತ್ತು ಇದು ಮಗುವಿನ ಎಚ್ಚರಿಕೆ, ನಡವಳಿಕೆ ಮತ್ತು ಕಲಿಕೆಯ ಸಾಮರ್ಥ್ಯದ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ.

ಲಾಕೋಸಮೈಡ್‌ ಅನ್ನು ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

• ಪ್ಯಾರಾಸಿಟಮೆಲ್ ಅಥವಾ ಇಬುಪ್ರೊಫೆನ್‌ವುಳ್ಳ ಔಷಧಿಗಳು, ಆಂಟಿಬಯಾಟಿಕ್ಸ್ ಅಥವಾ ಇತರೆ ಸಾಮಾನ್ಯ ಔಷಧಿಗಳನ್ನು ನಿಮ್ಮ ಮಗುವಿಗೆ ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

• ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.

• ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರೆ ಔಷಧಿಗಳು, ಲಾಕೋಸಮೈಡ್‌ನಷ್ಟೇ ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಅಥವಾ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಾದರೆ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದರೆ, ವೈದ್ಯರನ್ನ ಸಂಪರ್ಕಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು…

• ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್ ನಲ್ಲಿ ಇಡುವ ಅವಶ್ಯಕತೆ ಇಲ್ಲ.

• ಮಕ್ಕಳ ಕಣ್ಣಿಗೆ ಕಾಣಿಸದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.

• ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore