Dr C P Ravikumar

ಟೊಪಿರಮೇಟ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ

MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)

ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ಹೆಸರುಗಳು:

ಮಾತ್ರೆ: ಟೊಪಿರೊಲ್ಮ ಟೊಪಜ್

“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”

ಟೊಪಿರಮೇಟ್ ಎಂಬುದು ಅಪಸ್ಮಾರದಲ್ಲಿ ಕಂಡು ಬರುವ ಟಾನಿಕ್-ಕ್ಲಾನಿಕ್ ಫಿಟ್ಸ್ ಮತ್ತು ಫೋಕಲ್ ಸೆಳೆವುಗಳ ನಿಯಂತ್ರಣದ ಚಿಕಿತ್ಸೆಯಲ್ಲಿ ಬಳಸುವ ಔಷಧವಾಗಿದೆ.

ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ಟೊಪಿರಮೇಟ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ನಿಮ್ಮ ಮಗುವಿಗೆ ಟೊಪಿರಮೇಟ್ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.

ಟೊಪಿರಮೇಟ್ ಯಾವ ರೂಪದಲ್ಲಿ ಲಭ್ಯವಿದೆ?

ಮಾತ್ರೆಗಳ ರೂಪದಲ್ಲಿ ಲಭ್ಯವಿದೆ.

ಟೊಪಿರಮೇಟ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ; ಬೆಳಿಗ್ಗೆ ಮತ್ತು ಸಂಜೆ. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ. ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭಗಳಲ್ಲಿ ವೈದ್ಯರ ಸಲಹೆಯನ್ನು ಪಾಲಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಟೊಪಿರಮೇಟ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಟೊಪಿರಮೇಟ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಟೊಪಿರಮೇಟ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನು ನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು? ? “ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು, ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡ ಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು(ಅಡ್ಡಪರಿಣಾಮಗಳು) ಉಂಟು ಮಾಡಬಹುದು.

ನಿಮ್ಮ ಚಿಂತೆಗೆ ಕಾರಣವಾಗಬಹುದಾದ ಅಡ್ಡಪರಿಣಾಮಗಳು

  • ಹಸಿವಿನ ಸಾಮರ್ಥ್ಯ ಕಡಿಮೆಯಾಗಿ ಮಗುವಿನ ತೂಕ ಕಡಿಮೆಯಾಗಬಹುದು
  • ಮೆಟಾಬಾಲಿಕ್ ಆಸಿಡೋಸಿಸ್: ಔಷಧದ ಪರಿಣಾಮದಿಂದಾಗಿ ರಕ್ತವು ಸಾಮಾನ್ಯಕ್ಕಿಂತ ಹೆಚ್ಚು ಆಮ್ಲೀಯವಾಗಿರುತ್ತದೆ. ಇದು ಉಸಿರಾಟದ ವೇಗವನ್ನು ಹೆಚ್ಚಿಸಬಹುದು, ಮಗುವಿನ ಗೊಂದಲದ ಸ್ಥಿತಿಗೆ, ವಾಕರಿಕೆ ಅಥವಾ ವಾಂತಿಗೆ ಕಾರಣವಾಗಬಹುದು.
  • ನಿರ್ಜಲೀಕರಣ: ನಿಮ್ಮ ಮಗು ಸಾಕಷ್ಟು ನೀರು ಕುಡಿಯುತ್ತಿದೆಯೆ ಎಂದು ಖಚಿತಪಡಿಸಿಕೊಳ್ಳಿ.
  • ಮೂತ್ರಪಿಂಡದ ಕಲ್ಲುಗಳು – ನಿಮ್ಮ ಮಗುವಿಗೆ ಹೆಚ್ಚು ನೀರು ಕುಡಿಯುವಂತೆ ಮಾಡುವ ಮೂಲಕ ಕಿಡ್ನಿಯಲ್ಲಿ ಕಲ್ಲುಗಳು ರೂಪುಗೊಳ್ಳುವ ಅಪಾಯವನ್ನು ಕಡಿಮೆ ಮಾಡಿ.

ನೀವು ತಿಳಿದುಕೊಳ್ಳಬೇಕಾದ ಇತರೆ ಅಡ್ಡಪರಿಣಾಮಗಳು

ಮಗುವು ಟೊಪಿರಮೇಟ್ ತೆಗೆದುಕೊಳ್ಳಲು ಪ್ರಾರಂಭಿಸಿದ ಶುರುವಿನಲ್ಲಿ ಈ ಕೆಳಗಿನ ಅಡ್ಡಪರಿಣಾಮಗಳು ಉಂಟಾಗಬಹುದು. ದಿನಗಳು ಕಳೆದಂತೆ, ಸುಮಾರು ಒಂದು ವಾರವಾಗುವಷ್ಟರಲ್ಲಿ. ಅಥವಾ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಎಲ್ಲವು ಸರಿ ಹೋಗುತ್ತದೆ. ವೈದ್ಯರ ಸಲಹೆಯಂತೆ ಟೊಪಿರಮೇಟ್ ನೀಡುವುದನ್ನು ಮುಂದುವರೆಸಿ.

  • ಮಗುವು ಅಸಹಜ ಎನಿಸುವಷ್ಟು ನಿದ್ರಿಸಬಹುದು ಅಥವಾ ಮಗುವಿನ ವರ್ತನೆಯಲ್ಲಿ ಬದಲಾವಣೆಗಳುಂಟಾಗಬಹುದು.
  • ಮಗುವಿನ ಹಸಿವು ಕಡಿಮೆಯಾಗಬಹುದು ಮತ್ತು ವಾಕರಿಕೆ/ ವಾಂತಿ ಉಂಟಾಗಬಹುದು.
  • ಆಹಾರದೊಂದಿಗೆ ಸಣ್ಣ ಪ್ರಮಾಣದಲ್ಲಿ ಔಷಧಿಯನ್ನು ನೀಡಿ, ದಿನಕಳೆದಂತೆ ಹೆಚ್ಚಿಸುವ ಮೂಲಕ ಈ ಸಮಸ್ಯೆಗಳನ್ನು ತಪ್ಪಿಸಬಹುದು.
  • ಅಪರೂಪಕ್ಕೆಂಬಂತೆ, ಈ ಔಷಧದ ಸೇವನೆಯು ಪದಗಳನ್ನು ಗುರುತಿಸುವ ಸಾಮರ್ಥ್ಯವನ್ನು ಕುಗ್ಗಿಸಬಹುದು.

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಇಷ್ಟೆಲ್ಲಾ ಅಡ್ಡಪರಿಣಾಮಗಳ ಹೊರತಾಗಿಯೂ, ಟೊಪಿರಮೇಟ್ ಉತ್ತಮ ಅಪಸ್ಮಾರ ನಿರೋಧಕ ಔಷಧವಾಗಿದ್ದು, ಮಗುವಿನ ವರ್ತನೆ, ಎಚ್ಚರಿಕೆ ಮತ್ತು ಕಲಿಕಾ ಸಾಮರ್ಥ್ಯದ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ.

ಟೊಪಿರಮೇಟ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

  • ಪ್ಯಾರಾಸಿಟಮೆಲ್ ಅಥವಾ ಇಬುಪ್ರೊಫೆನ್‌ವುಳ್ಳ ಔಷಧಿಗಳು, ಆಂಟಿಬಯಾಟಿಕ್ಸ್ ಅಥವಾ ಇತರೆ ಸಾಮಾನ್ಯ ಔಷಧಿಗಳನ್ನು ನಿಮ್ಮ ಮಗುವಿಗೆ ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.
  • ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.
  • ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರೆ ಔಷಧಿಗಳು, ಟೊಪಿರಮೇಟ್ ನಷ್ಟೇ ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಅಥವಾ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಾದರೆ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ.

ಟೊಪಿರಮೇಟ್ ಮತ್ತು ಗರ್ಭಧಾರಣೆ

  • ಟೊಪಿರಮೇಟ್ ಭ್ರೂಣದ ಮೇಲೆ ಗಮನಾರ್ಹ ಪರಿಣಾಮ ಬೀರುವುದರಿಂದ, ಗರ್ಭಾವಸ್ಥೆಯಲ್ಲಿ ಈ ಔಷಧಿಯನ್ನು ಬಳಸದಂತೆ ಸೂಚಿಸಲಾಗಿದೆ.
  • ಟೊಪಿರಮೇಟ್ ತೆಗೆದುಕೊಳ್ಳುವ ಮಹಿಳೆಯರು ಅಥವಾ ಹುಡುಗಿಯರಲ್ಲಿ ಅವರು ಸೇವಿಸುವ ಗರ್ಭನಿರೋಧಕ ಮಾತ್ರೆಯ ಕಡಿಮೆ ಪರಿಣಾಮಕಾರಿಯಾಗಬಹುದು. ಹಾಗಾಗಿ, ಪರ್ಯಾಯ ಗರ್ಭನಿರೋಧಕ ವಿಧಾನಗಳನ್ನು ಪರಿಗಣಿಸುವುದು ಉತ್ತಮ.

ಔಷಧಿಯನ್ನ ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು…

  • ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನು ಫ್ರಿಡ್ಜ್ ನಲ್ಲಿ ಇಡುವ ಅವಶ್ಯಕತೆ ಇಲ್ಲ.
  • ಮಕ್ಕಳ ಕಣ್ಣಿಗೆ ಕಾಣಿಸದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.
  • ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore