ಡಾ ಸಿ ಪಿ ರವಿ ಕುಮಾರ್
ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)
ಬ್ರ್ಯಾಂಡ್ ಹೆಸರುಗಳು: ಸಬ್ರಿಲ್ (ಮಾತ್ರೆ)
“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”
ವಿವಿಧ ಬಗೆಯ ಸೆಳೆವು (ಫಿಟ್ಸ್)ಗಳನ್ನು, ನಿರ್ದಿಷ್ಟವಾಗಿ ಶಿಶು ಸೆಳೆತ (ಎಪಿಲೆಪ್ಟಿಕ್ ಸೆಳೆತ ಎಂದೂ ಕರೆಯುತ್ತಾರೆ) ಮತ್ತು ಇತರ ಫೋಕಲ್ ಸೆಳೆತದ ಚಿಕಿತ್ಸೆಯಲ್ಲಿ ಇತರ ಔಷಧಿಗಳು ವಿಫಲವಾದ ಸಂದರ್ಭದಲ್ಲಿ ವಿಗಾಬಾಟ್ರಿನ್ ಅನ್ನು ಬಳಸಲಾಗುತ್ತದೆ.
ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?
ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ವಿಗಾಬಾಟ್ರಿನ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.
ನಿಮ್ಮ ಮಗುವಿಗೆ ವಿಗಾಬಾಟ್ರಿನ್ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.
ವಿಗಾಬಾಟ್ರಿನ್ ಯಾವ ರೂಪದಲ್ಲಿ ಲಭ್ಯವಿದೆ?
ವಿಗಾಬ್ರಾಟಿನ್, ಭಾರತದಲ್ಲಿ 500 ಎಂಜಿ ಸಾಮರ್ಥ್ಯದ ಮಾತ್ರೆಯ ರೂಪದಲ್ಲಿ ಲಭ್ಯವಿದ್ದು, ದುರದೃಷ್ಟವಶಾತ್, ಇದನ್ನು ಭಾರತದಲ್ಲಿ ಉತ್ಪಾದಿಸಲಾಗುವುದಿಲ್ಲ. ಆದ್ದರಿಂದ, ವಿವಿಧ ಮಾರ್ಗಗಳ ಮೂಲಕ ಔಷಧವನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ. ಹಾಗಾಗಿ, ಇದರ ಲಭ್ಯತೆಯಲ್ಲಿ ಆಗಾಗ್ಗೆ ತೊಂದರೆ ಉಂಟಾಗುತ್ತದೆ.
ವಿಗಾಬಾಟ್ರಿನ್ ಯಾವಾಗ ನೀಡಬೇಕು?
ದಿನಕ್ಕೆ ಎರಡು ಬಾರಿ; ಬೆಳಿಗ್ಗೆ ಮತ್ತು ಸಂಜೆ. ಆದರೆ, ಕನಿಷ್ಟ 10-12 ಗಂಟೆಗಳ ಅಂತರದಲ್ಲಿ
ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು
ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.
ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?
ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.
ಯಾವುದೇ ಕಾರಣಕ್ಕೂ ಎರಡು ಡೋಸ್ ವಿಗಾಬಾಟ್ರಿನ್ ನೀಡಬೇಡಿ.
ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಎರಡನೇ ಡೋಸ್ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.
ಔಷಧಿಯ ಪ್ರಮಾಣ ಎಷ್ಟಿರಬೇಕು?
ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ವಿಗಾಬಾಟ್ರಿನ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.
ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ವಿಗಾಬಾಟ್ರಿನ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನು ನಿಮ್ಮ ವೈದ್ಯರು ವಿವರಿಸುತ್ತಾರೆ.
ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ
ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.
ಔಷಧಿಯನ್ನು ಹೇಗೆ ನೀಡಬೇಕು? ? “ಔಷಧಿಗಳನ್ನು ನೀಡುವುದು”
ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು, ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.
ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡ ಪರಿಣಾಮಗಳು”
ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು(ಅಡ್ಡಪರಿಣಾಮಗಳು) ಉಂಟು ಮಾಡಬಹುದು.
ನಿಮ್ಮನ್ನು ಚಿಂತೆಗೀಡುವ ಅಡ್ಡಪರಿಣಾಮಗಳು
ದೃಷ್ಟಿ: ವಿಗಾಬಾಟ್ರಿನ್ ಔಷಧವನ್ನು 6 – 12 ತಿಂಗಳುಗಳಿಗಿಂತ ಹೆಚ್ಚು ಕಾಲ ಈ ಔಷಧಿಗಳನ್ನು ಸೇವಿಸುವ ಸುಮಾರು ಮೂರನೇ ಒಂದು ಭಾಗದಷ್ಟು ಜನರಿಗೆ ಬಾಹ್ಯ ದೃಷ್ಟಿಯಲ್ಲಿ ವ್ಯತ್ಯಾಸವಾಗುತ್ತದೆ. ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡು ಬಂದಿದೆ. ಮಕ್ಕಳಲ್ಲಿ, ಈ ಸಮಸ್ಯೆಯು ಯಾವಾಗ ಉಂಟಾಗಬಹುದು ಎಂಬುದನ್ನು ಅಂದಾಜಿಸುವುದು ಕಷ್ಟ. ಮಗು ಈ ವಿಷಯದಲ್ಲಿ ನಿಮಗೆ ಸಹಕರಿಸಿದಾಗಲೆಲ್ಲಾ ಈ ದೃಷ್ಟಿ ಸಾಮರ್ಥ್ಯವನ್ನು ನಿಯಮಿತವಾಗಿ ಪರಿಶೀಲಿಸಬಹುದು ಮತ್ತು ಮೇಲ್ವಿಚಾರಣೆ ಮಾಡಬಹುದು.
ಅಧಿಕ ನಿದ್ರೆ: ಕೆಲವು ಮಕ್ಕಳು ಅತಿಯಾದ ನಿದ್ರೆ ಮಾಡಬಹುದು, ಕುಡಿಯಲು ಅಥವಾ ತಿನ್ನಲು ಸಹ ಎಚ್ಚರಗೊಳ್ಳುವುದಿಲ್ಲ ಅಥವಾ ಅವರು ಸಹಜವಾಗಿ ಎಂದಿನಂತೆ ಆಟವಾಡುವುದಿಲ್ಲ. ಅಂತಹ ಸಂದರ್ಭಗಳಲ್ಲಿ, ಔಷಧಿಯ ಪ್ರಮಾಣವನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗುತ್ತದೆ.
ಯಕೃತ್ತಿನ ಕಾಯಿಲೆ: ಯಾವುದೇ ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರೆ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ ಉಂಟಾದರೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದರೆ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.
ನೀವು ತಿಳಿದುಕೊಳ್ಳಬೇಕಾದ ಇತರೆ ಅಡ್ಡಪರಿಣಾಮಗಳು
ಮಗುವು ವಿಗಾಬಾಟ್ರಿನ್ ತೆಗೆದುಕೊಳ್ಳಲು ಪ್ರಾರಂಭಿಸಿದ ಶುರುವಿನಲ್ಲಿ ಈ ಕೆಳಗಿನ ಅಡ್ಡಪರಿಣಾಮಗಳು ಉಂಟಾಗಬಹುದು. ದಿನಗಳು ಕಳೆದಂತೆ, ಸುಮಾರು ಒಂದು ವಾರವಾಗುವಷ್ಟರಲ್ಲಿ. ಅಥವಾ ಮಗುವಿನ ದೇಹ ಔಷಧಿಗೆ ಹೊಂದಿಕೊಂಡಂತೆ ಎಲ್ಲವು ಸರಿ ಹೋಗುತ್ತದೆ. ವೈದ್ಯರ ಸಲಹೆಯಂತೆ ಸ್ಟಿರಿಪೆಂಟಾಲ್ ನೀಡುವುದನ್ನು ಮುಂದುವರೆಸಿ.
ಮಗುವಿಗೆ ದದ್ದುಗಳು ಉಂಟಾದಲ್ಲಿ, ತಕ್ಷಣ ಔಷಧ ನೀಡುವುದನ್ನು ನಿಲ್ಲಿಸಿ ವೈದ್ಯರ ಸಲಹೆ ಪಡೆಯಿರಿ.
ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ, ನಿಮ್ಮ ವೈದ್ಯರನ್ನು ಸಂಪರ್ಕಿಸಿ.
ಮೇಲಿನ ಅಡ್ಡಪರಿಣಾಮಗಳನ್ನು ಹೊರತುಪಡಿಸಿ, ವಿಗಾಬಾಟ್ರಿನ್ ಉತ್ತಮ ಅಪಸ್ಮಾರ ನಿರೋಧಕ ಔಷಧಿಯಾಗಿದ್ದು, ಮತ್ತು ಸೆಳೆತಗಳು ಉಂಟಾಗುವ ನಿರ್ದಿಷ್ಟ ಸಂದರ್ಭಗಳಲ್ಲಿ ಮಾತ್ರ ಇದನ್ನು ಬಳಸಲಾಗುತ್ತದೆ ಮತ್ತು ಅದರ ಪರಿಣಾಮಕಾರಿತ್ವವು ಅನುಮಾನಾಸ್ಪದವಾಗಿ ಸಾಬೀತಾಗಿದೆ.
ವಿಗಾಬಾಟ್ರಿನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?
ಔಷಧಿಯನ್ನ ಎಲ್ಲಿ ಸಂರಕ್ಷಿಸಿ ಇಡಬೇಕು?
ಔಷಧಿಯನ್ನು…
ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.
ಉಲ್ಲೇಖಗಳು:
CONSULTANT – PEDIATRIC NEUROLOGY
Aster CMI Hospital, Bangalore